ಚಿಕ್ಕಬಳ್ಳಾಪುರ: ಕಳೆದ 13 ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ ತಡರಾತ್ರಿ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಗೌರಿಬಿದನೂರು ತಾಲೂಕಿನ ದ್ವಾರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಧಾರಾಕಾರ ಮಳೆಗೆ ಗೋಡೆ ಕುಸಿತ.. ವೃದ್ಧೆ ಸಾವು
ಕಳೆದ 13 ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ ತಡರಾತ್ರಿ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಗೌರಿಬಿದನೂರು ತಾಲೂಕಿನ ದ್ವಾರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಧಾರಾಕಾರ ಮಳೆಗೆ ಗೋಡೆ ಕುಸಿತ
ಪುಟ್ಟನರಸಮ್ಮ (76) ಸಾವನ್ನಪಿದ ವೃದ್ಧೆ. ಸೀಟಿನ ಮನೆಯಲ್ಲಿ ಈ ವೃದ್ಧೆ ಜೀವನ ಸಾಗುಸುತ್ತಿದ್ದರು. ಆದರೆ, ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ನೆನೆದು ವೃದ್ಧೆಯ ಮೇಲೆ ಬಿದ್ದಿದೆ. ಗ್ರಾಮಸ್ಥರು ಬಂದು ನೋಡಿದಾಗ ವೃದ್ಧೆ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.