ಚಿಕ್ಕಬಳ್ಳಾಪುರ: ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನ ಬೆಂಗಳೂರು ಹಿಂದೂಪುರ ರಸ್ತೆಯ ಬ್ಯಾಂಬೂ ಢಾಬಾದ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಅಸ್ಸೋಂ ಮೂಲದ ಧೀರೇನ್ ಸಿಂಗ್ (50) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಅಸ್ಸೋಂ ಮೂಲದ ಉತ್ತಮ್, ನಿರಂನ್, ಧೋನಿ (22), ತಾಲೂಕಿನ ವೇದಲವೇಣಿ ಗ್ರಾಮದ ಧರ್ಮಯ್ಯ (45), ಗಂಗಮ್ಮ (50), ನರಸಮ್ಮ (65) ಎಂದು ಗುರುತಿಸಲಾಗಿದೆ.
ಕಾರು-ಆಟೋ ನಡುವೆ ಮುಖಾಮುಖಿ ಡಿಕ್ಕಿ ಬೆಂಗಳೂರಿನಿಂದ ಬರುತ್ತಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೇದಲವೇಣಿ ಗ್ರಾನೇಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದು ಬಂದಿದೆ.
ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಟೋದಲ್ಲಿದ್ದವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಎಸ್ಐ ವಿಜಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬೈಕ್‌ನ ಇಂಧನ ಟ್ಯಾಂಕ್ ಸ್ಫೋಟ: ಸವಾರನಿಗೆ ತೀವ್ರ ಗಾಯ, ಜೊತೆ ಬರುತ್ತಿದ್ದವ ಎಸ್ಕೇಪ್