ಕರ್ನಾಟಕ

karnataka

ETV Bharat / state

ಟ್ರ್ಯಾಕ್ಟರ್ ಚಾಲಕನ ಅಜಾಗರೂಕ ಚಾಲನೆ ಆರೋಪ, ಬೈಕ್​ ಸವಾರ ಬಲಿ - One man died in Chikkaballapur road accident

ಟ್ರ್ಯಾಕ್ಟರ್ ಚಾಲಕ ಅತಿವೇಗದಿಂದ ವಾಹನ ಚಲಾಯಿಸಿದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಶಂಬೂಕನಗರ ಬಳಿ ನಡೆದಿದೆ.

Chikkaballapur road accident
ಚಿಕ್ಕಬಳ್ಳಾಪುರ ರಸ್ತೆ ಅಪಘಾತ ನ್ಯೂಸ್

By

Published : Jan 16, 2020, 5:57 PM IST

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಚಾಲಕನ ಅತಿವೇಗದಿಂದ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಶಂಬೂಕನಗರ ಬಳಿ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್​ ನಡುವೆ ಡಿಕ್ಕಿ

ಕಲಿದೇವನಪುರ ಗ್ರಾಮದ ಮೋಹನ್ (25) ಅಪಘಾತದಲ್ಲಿ ಮೃತಪಟ್ಟ ಯುವಕ.

ಮತ್ತೋರ್ವ ಹಿಂಬದಿ ಸವಾರ ಸುಭ್ರಮಣಿಗೆ ಗಾಯಗಳಾಗಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂತರ ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೇ ಮೋಹನ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ABOUT THE AUTHOR

...view details