ಚಿಕ್ಕಬಳ್ಳಾಪುರ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೊಮ್ಮನಹಳ್ಳಿ ಸಮೀಪ ನಡೆದಿದೆ.
ಭೀಕರ ರಸ್ತೆ ಅಪಘಾತ: ಓರ್ವ ಸಾವು,ಇಬ್ಬರ ಸ್ಥಿತಿ ಗಂಭೀರ - ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ನ್ಯೂಸ್
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೊಮ್ಮನಹಳ್ಳಿ ಸಮೀಪ ನಡೆದಿದೆ.
road accident
ಶಿಡ್ಲಘಟ್ಟ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 234 ರ ಬೊಮ್ಮನಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ವೀರಪುರದ ಗಗನ್ (20) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಲ್ಲಿ ಒಬ್ಬರಿಗೆ ಕಾಲು ಮುರಿದಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.