ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆ ಕಂಡಿದೆ.
ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕೊರೊನಾ ಸೊಂಕು ಧೃಡ: ಸೋಂಕಿತರ ಸಂಖ್ಯೆ 20 - corona
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಮೊತ್ತೊಂದು ಕೊರೊನಾ ಪ್ರಕರಣ ದೃಢಪಟ್ಟಿದೆ.
corona
ನಗರದ 17 ವಾರ್ಡ್‌ನ 54 ವರ್ಷದ ವ್ಯಕ್ತಿಗೆ ಪಿ-250 ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಚಿಕ್ಕಬಳ್ಳಾಪುರ ನಗರ ಸೀಲ್ ಡೌನ್ ಮಾಡಲಾಗಿದ್ದರೂ, ಕಳೆದ ಎರಡು ದಿನಗಳಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆ ಕಂಡಿರುವುದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯ ಸೊಂಕಿತ ವ್ಯಕ್ತಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.