ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದ ಕೆಎಸ್​ಆರ್​ಟಿಸಿ ಚಾಲಕರು... ಬಸ್​ ತಡೆದು ಪ್ರತಿಭಟನೆ

ಕೆಎಸ್‍ಆರ್​ಟಿಸಿ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಬಸ್​​​ಪಾಸ್‍ ನಿರಾಕರಿಸುತ್ತಿರುವುದನ್ನು ಖಂಡಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

organisation-protest-against-state-government

By

Published : Oct 17, 2019, 8:54 PM IST

ಗೌರಿಬಿದನೂರು:ಕೆಎಸ್‍ಆರ್​ಟಿಸಿ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಬಸ್​​​ಪಾಸ್‍ ನಿರಾಕರಿಸುತ್ತಿರುವುದನ್ನು ಖಂಡಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ತೊಂಡೇಬಾವಿ ಬಸ್​ ನಿಲ್ದಾಣದಲ್ಲಿ ಬಸ್​​​​ ತಡೆದು ಪ್ರತಿಭಟನೆ ನಡೆಸಿದರು.

ಸಂಘಟನೆಯ ತಾಲೂಕು ಅಧ್ಯಕ್ಷ ಜಿ.ಎ.ಪ್ರದೀಪ್ ಮಾತನಾಡಿ, ಹಲವು ತಿಂಗಳನಿಂದ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಚಾಲಕ ಮತ್ತು ನಿರ್ವಾಹಕರು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಿದ್ದಾಗ ಬಸ್ ನಿಲ್ಲಿಸದೆ ಬಸ್​​ ಚಲಾಯಿಸಿಕೊಂಡು ಹೋಗುತ್ತಿದ್ದಾರೆ. ಹೀಗಾದರೆ ಮಕ್ಕಳ ಭವಿಷ್ಯಕ್ಕೆ ಕುತ್ತು ಬರುತ್ತದೆ. ಸಂಬಂದಪಟ್ಟ ಆಧಿಕಾರಿಗಳಿಗೆ ಈಗಾಗಲೇ ದೂರು ನೀಡಿದ್ರೂ ಕವಡೆಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆ ಸದಸ್ಯರು

ತೊಂಡೇಬಾವಿ ಹೋಬಳಿಯ ಸುತ್ತಮುತ್ತ 200ಕ್ಕೂ ಹೆಚ್ಚು ಹಳ್ಳಿಗಳಿವೆ. ಇಲ್ಲಿನ ಎಲ್ಲ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಗೌರಿಬಿದನೂರಿಗೆ ಹೋಗುತ್ತಾರೆ. ಅದರಲ್ಲೂ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯವಿಲ್ಲ. ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರವಾಗುತ್ತಿದ್ದಾರೆ ಎಂದು ಹೇಳಿದರು.

ಸ್ಥಳಕ್ಕೆ ತಹಶೀಲ್ದಾರ್ ಎಚ್.ಶ್ರೀನಿವಾಸ್, ಕೆಎಸ್‍ಆರ್​ಟಿಸಿ ವಿಭಾಗೀಯ ಆಧಿಕಾರಿ ಶಾಂತ, ಮಂಚೇನಹಳ್ಳಿ ಪಿಎಸೈ ಭಾಸ್ಕರ್ ಮನವಿ ಪತ್ರ ಸ್ವೀಕರಿಸಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

ABOUT THE AUTHOR

...view details