ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ ಉಪಚುನಾವಣೆ:ರಾಜಕೀಯ ಬಲ ಪರ್ದಶನಕ್ಕೆ ಅಖಾಡ ಸಿದ್ದಗೊಳಿಸಿದ ಪಕ್ಷಗಳು

ಚಿಕ್ಕಬಳ್ಳಾಪುರ ಉಪಚುನಾವಣೆಗೆ ನಾಳೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಲಿದ್ದು, ತಾಲೂಕಿನಲ್ಲಿ ಹೆಚ್ಚು ಜನರನ್ನು ಸೇರಿಸಲು ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ.

ರಾಜಕೀಯ ಬಲ ಪರ್ದಶನಕ್ಕೆ ಅಖಾಡ ಸಿದ್ದಗೊಳಿಸಿದ ಪಕ್ಷಗಳು

By

Published : Nov 17, 2019, 9:58 AM IST

ಚಿಕ್ಕಬಳ್ಳಾಪುರ: ಉಪಚುನಾವಣೆಗೆ ನಾಳೆ ಬಿಜೆಪಿ. ಜೆಡಿಎಸ್. ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಲಿದ್ದು, ತಾಲೂಕಿನ ಹೆಚ್ಚು ಜನರನ್ನು ಸೇರಿಸಲು ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಂ.ಅಂಜಿನಪ್ಪ ಅವರು ಅಧಿಕೃತವಾಗಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್​ನ ಎಂ. ಅಂಜಿನಪ್ಪ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡಸೋಮವಾರನಾಮಪತ್ರ ಸಲ್ಲಿಸಲಿದ್ದಾರೆ . ಮತ್ತು ಬಿಜೆಪಿಯಿಂದ ಮಾಜಿ ಶಾಸಕ ಡಾ.ಕೆ. ಸುಧಾಕರ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲಿದ್ದಾರೆ.

ರಾಜಕೀಯ ಬಲ ಪರ್ದಶನಕ್ಕೆ ಅಖಾಡ ಸಿದ್ದಗೊಳಿಸಿದ ಪಕ್ಷಗಳು

ಸೋಮವಾರ ನಾಮಪತ್ರ ಸಲ್ಲಿಕೆ ವೇಳೆ ಆಯಾ ಪಕ್ಷಗಳ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದು, ಶಕ್ತಿ ಪ್ರದರ್ಶನಕ್ಕೆ ಅಖಾಡ ಸಿದ್ದಗೊಂಡಿದೆ.ಮೂರು ಪಕ್ಷದವರು ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಸಲಿದ್ದಾರೆ.

ABOUT THE AUTHOR

...view details