ಚಿಕ್ಕಬಳ್ಳಾಪುರ:ಮಧುಮೇಹದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಚಿಂತಾಮಣಿಯಲ್ಲಿ ಈ ಘಟನೆ ನಡೆದಿದೆ. ಪ್ರಕಾಶ್ (45) ಮೃತ ರೋಗಿ.
ಆಸ್ಪತ್ರೆಯಲ್ಲಿ ರೋಗಿ ಸಾವು: ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ - ಮರೋಣೋತ್ತರ ಪರೀಕ್ಷೆ
ಮಧುಮೇಹದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
patient-death-for-doctors-negligence
ಕೆ.ಆರ್. ಬಡಾವಣೆ ನಿವಾಸಿ ಪ್ರಕಾಶ್ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು. ವೈದ್ಯರು ಯಾವುದೋ ಇಂಜೆಕ್ಷನ್ ಕೊಟ್ಟು ರೋಗಿ ಪತ್ನಿಗೆ ಗಂಡನ ಸ್ಥಿತಿ ಚಿಂತಾಜನಕವಾಗಿದ್ದು, ಕೂಡಲೇ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ.
ಕೋಲಾರ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಪ್ರಕಾಶ್ ಮೃತಪಟ್ಟಿದ್ದಾರೆ. ಕ್ಲಿನಿಕ್ನಲ್ಲಿದ್ದ ಬೇರೊಂದು ಇಂಜಕ್ಷನ್ ನೀಡಿದ್ದಕ್ಕೇ ನನ್ನ ತಂದೆ ಸಾವಿಗೆ ಕಾರಣ ಎಂದು ಮಗಳು ಆರೋಪಿಸಿದ್ದಾಳೆ. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮರೋಣೋತ್ತರ ಪರೀಕ್ಷೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ.