ಗೌರಿಬಿದನೂರು: ಕೊರೊನಾ ಸೋಂಕಿನಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗಾದಲ್ಲಿ 40 ಮಂದಿ ಶಂಕಿತ ಸೋಂಕಿತರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.
ಗೌರಿಬಿದನೂರಿನಲ್ಲಿ 40 ಮಂದಿ ಕೊರೊನಾ ಶಂಕಿತರು ಆಸ್ಪತ್ರೆಯಿಂದ ಬಿಡುಗಡೆ
ಗುರುವಾರ ಗೌರಿಬಿದನೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 40 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
Gauribidanu
ಆಸ್ಪತ್ರೆಯಲ್ಲಿ ನಿಗಾದಲ್ಲಿ ಗ್ರಾಮಾಂತರ ಎಸ್ಐ ಮೋಹನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಅಂದನೂರು ಗ್ರಾಮದ ಕೊರೊನಾ ವಾರಿಯರ್ಸ್, 12 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 40 ಮಂದಿ ಬಿಡುಗಡೆಗೊಂಡಿದ್ದಾರೆ.
ಗುಣಮುಖರಾದವರಿಗೆ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಸೇರಿ ಹೂಮಳೆ ಸುರಿಸಿ, ಚಪ್ಪಾಳೆ ತಟ್ಟುವ ಮೂಲಕ ಆತ್ಮೀಯವಾಗಿ ಬೀಳ್ಕೊಟ್ಟಿದ್ದಾರೆ.
Last Updated : May 8, 2020, 3:06 PM IST