ಚಿಕ್ಕಬಳ್ಳಾಪುರ : ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಬಹುತೇಕ ಶಾಂತಿಯುತ ಮತದಾನ ನಡೆದಿದೆಯೆಂದು ಜಿಲ್ಲಾಧಿಕಾರಿ ಆರ್.ಲತಾ ಸಂತಸ ವ್ಯಕ್ತಪಡಿಸಿದ್ದಾರೆ.
ಶಾಂತಿಯುತವಾಗಿ ನಡೆಯಿತು ಚಿಕ್ಕಬಳ್ಳಾಪುರ ಉಪಚುನಾವಣೆ - chikkaballapur latest news
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 86.19% ಮತದಾನ ನಡೆದಿದ್ದು 15 ಕ್ಷೇತ್ರಗಳ ಪೈಕಿ ಹೆಚ್ಚು ಮತದಾನ ನಡೆದಿರುವ ಕ್ಷೇತ್ರವಾಗಿ ಹೊರಹೊಮ್ಮಿದೆ. ಇನ್ನು ಬಹುತೇಕ ಶಾಂತಿಯುತ ಮತದಾನ ನಡೆದಿದೆಯೆಂದು ಜಿಲ್ಲಾಧಿಕಾರಿ ಆರ್.ಲತಾ ಸಂತಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 86.19% ಮತದಾನ ನಡೆದಿದ್ದು 15 ಕ್ಷೇತ್ರಗಳ ಪೈಕಿ ಹೆಚ್ಚು ಮತದಾನ ನಡೆದಿರುವ ಕ್ಷೇತ್ರವಾಗಿ ಹೊರಹೊಮ್ಮಿದೆ. ಒಟ್ಟು 254 ಮತಗಟ್ಟೆಗಳನ್ನು ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದು 46 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳಾಗಿ ಸೂಚಿಸಲಾಗಿತ್ತು. ಸದ್ಯ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆದಿದೆಯೆಂದು ಕ್ಷೇತ್ರದ ಮತದಾರರಿಗೆ, ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಅಭ್ಯರ್ಥಿಯ ಭವಿಷ್ಯ ಮತಯಂತ್ರಗಳಲ್ಲಿ ಅಡಗಿದ್ದು ಮತಯಂತ್ರಗಳನ್ನು ಅಧಿಕಾರಿಗಳು ನಗರದ ಜ್ಯೂನಿಯರ್ ಕಾಲೇಜು ಕೊಠಡಿಗಳಲ್ಲಿ ಭದ್ರಪಡಿಸಿ ಇಟ್ಟಿದ್ದಾರೆ. 9 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರು ಯಾರ ಕೈಹಿಡಿಯಲಿದ್ದಾರೆಂಬುವುದು ತಿಳಿದು ಬರಲಿದೆ.