ಚಿಂತಾಮಣಿ :ಜಿಲ್ಲೆಯ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಕೇಂದ್ರವಾಗಿರುವ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾದ ಆವರಣದಲ್ಲಿ ಸಾಮಾಜಿಕ ಅಂತರ ಪಾಲಿಸದೆ, ಮಾಸ್ಕ್ ಧರಿಸದೇ ಓಡಾಡುವವರಿಗೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಡಿ. ಹನುಮಂತರಾಯಪ್ಪ ರಸ್ತೆಗೆ ಇಳಿದು ದಂಡ ಹಾಕಿದ ಘಟನೆ ಇಂದು ನಡೆದಿದೆ.
ಮುರಗಮಲ್ಲಾ ದರ್ಗಾ ಬಳಿ ಮಾಸ್ಕ್ ಧರಿಸದವರಿಗೆ ಬಿತ್ತು ದಂಡ - Chintamani news
ಮುರಗಮಲ್ಲಾ ದರ್ಗಾದ ಅಮ್ಮಾಜಾನ್ ಬಾವಾಜಾನ್ ದರ್ಶನವನ್ನು ಪಡೆಯಲು ಪ್ರತಿನಿತ್ಯ ನೂರಾರು ಭಕ್ತರು ಆಗಮಿಸುತ್ತಿರುತ್ತಾರೆ. ಇದರ ಸಲುವಾಗಿಯೇ ಇಂದು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡದವರಿಗೆ ದಂಡವನ್ನು ವಿಧಿಸಿ ಅರಿವು ಮೂಡಿಸಲಾಯಿತು.
ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ತಾಲ್ಲೂಕಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸಹ ಸಾರ್ವಜನಿಕರು ಮಾತ್ರ ನಮಗೇನು ಸಂಬಂಧವಿಲ್ಲವೆಂಬಂತೆ ನಡೆದುಕೊಳ್ಳುತ್ತಿದ್ದಾರೆ. ಇದರ ಸಲುವಾಗಿಯೇ ಅಧಿಕಾರಿಗಳು ರಸ್ತೆಗಿಳಿದು ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಿದ್ದಾರೆ. ಇನ್ನೂ ಮುರಗಮಲ್ಲಾ ದರ್ಗಾದ ಅಮ್ಮಾಜಾನ್ ಬಾವಾಜಾನ್ ದರ್ಶನವನ್ನು ಪಡೆಯಲು ಪ್ರತಿನಿತ್ಯ ನೂರಾರು ಭಕ್ತರು ಆಗಮಿಸುತ್ತಿರುತ್ತಾರೆ. ಇದರ ಸಲುವಾಗಿಯೇ ಇಂದು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡದವರಿಗೆ ದಂಡವನ್ನು ವಿಧಿಸಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಿನ ಕಂದಾಯ ಅಧಿಕಾರಿಗಳಾದ ಸುಬ್ರಹ್ಮಣಿ, ದಲಾಯಿ ಲಾ ಖಾನ್, ಬಿಲ್ ಕಲೆಕ್ಟರ್ ಮಂಜುನಾಥ್ ಸೇರಿದಂತೆ ಇತರ ಅಧಿಕಾರಿಗಳು ಭಾಗಿಯಾಗಿದ್ದರು.