ಚಿಂತಾಮಣಿ: ತಾಲೂಕಿನ ಬುರಮಾಕಲಹಳ್ಳಿ ಗ್ರಾಮದ ಸಂಜೀವ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮವನ್ನು ತಹಶೀಲ್ದಾರ್ ವಿಶ್ವನಾಥ್ ಉದ್ಘಾಟಿಸಿದರು.
ಚಿಂತಾಮಣಿಯಲ್ಲಿ ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮ - ಗ್ರಾಮಾಂತರ ಪ್ರದೇಶಗಳ ಜನರಿಗೆ ಸರ್ಕಾರಿ ಸೌಲಭ್ಯ
ಗ್ರಾಮಾಂತರ ಪ್ರದೇಶಗಳ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
![ಚಿಂತಾಮಣಿಯಲ್ಲಿ ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮ ಚಿಂತಾಮಣಿ](https://etvbharatimages.akamaized.net/etvbharat/prod-images/768-512-5885307-thumbnail-3x2-sfhgh.jpg)
ಬಳಿಕ ಮಾತನಾಡಿದ ಅವರು, ಸರ್ಕಾರಿ ಯೋಜನೆಗಳನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ವಿಶೇಷವಾಗಿ ಗ್ರಾಮ, ಹೋಬಳಿ ಮಟ್ಟದಲ್ಲಿ ಕೆಲಸ ಮಾಡುವ ಗ್ರಾಮ ಲೆಕ್ಕಿಗರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ನಾಡಕಚೇರಿಯ ಅಧಿಕಾರಿಗಳು ಗ್ರಾಮೀಣ ಜನರ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸೂಚಿಸಿದರು.
ಕೆಲವು ಮಧ್ಯವರ್ತಿಗಳು ಸ್ವಾರ್ಥದಿಂದ ಅಧಿಕಾರಿಗಳ ಹೆಸರಿನಲ್ಲಿ ಫಲಾನುಭವಿಗಳಿಂದ ಹಣವನ್ನು ಪೀಕುತ್ತಾರೆ. ಅಧಿಕಾರಿಗಳೇ ಮನೆ ಬಾಗಿಲಿಗೆ ಹೋಗಿ ಕೆಲಸ ಮಾಡಿಕೊಟ್ಟರೆ ಸೇವೆಯೂ ಸಾರ್ಥಕವಾಗುತ್ತದೆ. ಸಾರ್ವಜನಿಕರಲ್ಲಿ ಉತ್ತಮ ಗೌರವ ಸಿಗುತ್ತದೆ. ಮದ್ಯವರ್ತಿಗಳಿಗೆ ಕಡಿವಾಣವೂ ಹಾಕಬಹುದು ಎಂದರು.