ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಗೌರಿಬಿದನೂರಿನ ಶಾಸಕ ಹಾಗೂ ಮಾಜಿ ಕೃಷಿ ಸಚಿವ ಶಿವಶಂಕರ್ ರೆಡ್ಡಿ ಸ್ಪಷ್ಟಪಡಿಸಿದರು.
ಸುಳ್ಳು ಸುದ್ದಿಗಳಿಗೆ ಜನತೆ ಆತಂಕ ಪಡುವ ಅವಶ್ಯಕತೆಯಿಲ್ಲ: ಶಿವಶಂಕರ್ ರೆಡ್ಡಿ - ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ
ನಮ್ಮ ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲೆ ಎಂದು ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸ್ಪಷ್ಟಪಡಿಸಿದರು.
ಶಿವಶಂಕರ್ ರೆಡ್ಡಿ
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ದಿನವಷ್ಟೇ ಗೌರಿಬಿದನೂರು ತಾಲೂಕಿನ ಆಲೀಪುರ ಗ್ರಾಮದಲ್ಲಿ ಎರಡು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಆದರೆ ಯಾವುದೇ ಸೋಂಕು ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಆಲೀಪುರ ಗ್ರಾಮದಿಂದ ಕಳೆದ ತಿಂಗಳಲ್ಲಿ ವಿದೇಶಗಳಿಗೆ ಹೋಗಿ ಬಂದ ಇಬ್ಬರನ್ನು ಕಳೆದ 15 ದಿನಗಳ ಕಾಲ ಮಾನಿಟರಿಂಗ್ ಮಾಡಿದ್ದು, ಯಾವುದೇ ತೊಂದರೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆಂದು ತಿಳಿಸಿದರು.