ಚಿಕ್ಕಬಳ್ಳಾಪುರ:ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ನಿಮಿತ್ತ ಚಿಕ್ಕಬಳ್ಳಾಪುರ ನಗರಸಭೆಯಿಂದ ಪ್ಲಾಸ್ಟಿಕ್ ಬಳಕೆಯ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್ ವಸ್ತುಗಳ ಶವಯಾತ್ರೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲೆ ಪ್ಲಾಸ್ಟಿಕ್ ಮುಕ್ತ ಮಾಡಲು ಶವಯಾತ್ರೆ... ಇದೆಂಥ ಅಭಿಯಾನ!? - plastic dead body procession
ಚಿಕ್ಕಬಳ್ಳಾಪುರ ನಗರಸಭೆಯಿಂದ ಪ್ಲಾಸ್ಟಿಕ್ ಬಳಕೆಯ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್ ವಸ್ತುಗಳ ಶವಯಾತ್ರೆ ನಡೆಸಲಾಯಿತು.
ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್ ವಸ್ತುಗಳ ಶವಯಾತ್ರೆ
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ, ಪ್ಲಾಸ್ಟಿಕ್ ಶವಯಾತ್ರೆಗೆ ಚಾಲನೆ ನೀಡಿದರು. ನಗರ ಸಭೆಯ ನೂರಾರು ಪೌರ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಜನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು. ನಗರದ ಮುಖ್ಯ ರಸ್ತೆಗಳಲ್ಲಿ ಶವಯಾತ್ರೆ ನಡೆಸಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸಿದರು. ಅಲ್ಲದೇ ಪ್ಲಾಸ್ಟಿಕ್ ಬಳಕೆ ಮಾಡಿದರೆ ದಂಡ ವಿಧಿಸಲಾಗುತ್ತದೆ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.
ನಗರ ಸಭೆಯ ಆಯುಕ್ತ ಡಿ.ಲೋಹಿತ್, ನಿರ್ಗಮಿತ ಆಯುಕ್ತ ಉಮಾಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.