ಗುಡಿಬಂಡೆ(ಚಿಕ್ಕಬಳ್ಳಾಪುರ) :ಅಪ್ರಾಪ್ತೆಗೆ ವಾಟ್ಸ್ಆ್ಯಪ್ನಲ್ಲಿ ಅಶ್ಲೀಲ ಸಂದೇಶ, ಫೋಟೋಗಳನ್ನು ರವಾನಿಸಿದ ಆರೋಪದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಆತನ ಸ್ನೇಹಿತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಮ್ಮಗುಟ್ಟಹಳ್ಳಿಯ ಗ್ರಾಪಂ ಸದಸ್ಯ ರಾಮಪಟ್ನ ಗ್ರಾಮದ ಶ್ರೀನಿವಾಸ ಮತ್ತು ಆತನಿಗೆ ಸಾಥ್ ನೀಡಿದ ಅದೇ ಗ್ರಾಮದ ಕೇಶವ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇವರು ಬಾಲಕಿಯ ಮೊಬೈಲ್‌ಗೆ ಅಶ್ಲೀಲ ಸಂದೇಶ, ಫೋಟೋ ಮತ್ತು ವಾಯ್ಸ್ ಮೆಸೇಜ್‌ಗಳನ್ನು ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಾಲಕಿಯ ತಾಯಿ ಮಗಳಿಗೆ ಆನ್‌ಲೈನ್ ತರಗತಿಗೆ ಉಪಯೋಗಿಸಲು ಮೊಬೈಲ್ ನೀಡಿದ್ದರು. ಆನ್‌ಲೈನ್ ತರಗತಿಗಳು ನಡೆಯುತ್ತಿರುವುದರಿಂದ ಬಾಲಕಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಈ ಮೊಬೈಲ್‌ಗೆ ಗ್ರಾಪಂ ಸದಸ್ಯ ಶ್ರೀನಿವಾಸ್ ಅಶ್ಲೀಲ ಸಂದೇಶ, ಫೋಟೋಗಳು ಹಾಗೂ ವಾಯ್ಸ್ ಮೆಸೇಜುಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.