ಕರ್ನಾಟಕ

karnataka

ETV Bharat / state

ರೈತರ ಹೋರಾಟಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಾಥ್; ಪ್ರತಿಭಟನಾ ನಿರತರ ಬಂಧನ - ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ

ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಾಥ್ ನೀಡಿದ ರೈತರನ್ನು ಚಿಕ್ಕಬಳ್ಳಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

Chikkaballapur
ಚಿಕ್ಕಬಳ್ಳಾಪುರ

By

Published : Dec 2, 2020, 3:46 PM IST

ಚಿಕ್ಕಬಳ್ಳಾಪುರ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕುವ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯ್ತು.

ಚಿಕ್ಕಬಳ್ಳಾಪುರದಲ್ಲಿ ರೈತರ ಬಂಧನ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ನೇತೃತ್ವದಲ್ಲಿ ನಗರ ಹೊರವಲಯದ ವಾಪಸಂದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 7ರ ಮಂಚನಬಲೆ ಅಂಡರ್ ಪಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದ್ದಾರೆ.

ABOUT THE AUTHOR

...view details