ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ನೇಣಿಗೆ ಶರಣಾಗಿದ್ದು, ಪತಿ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ಅಣಕನೂರು ಗ್ರಾಮದಲ್ಲಿ ನಡೆದಿದೆ.
ಗಂಡ-ಹೆಂಡತಿ ನಡುವೆ ಜಗಳವಾಗಿ ಅದು ತಾರಕಕ್ಕೆರಿದೆ. ಈ ವೇಳೆ ಮನಸ್ತಾಪಗೊಂಡ ಕಾನ್ಸ್ಟೇಬಲ್ ಪತ್ನಿ ಸ್ನೇಹಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡ್ತಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಕಾನ್ಸ್ಟೇಲಬ್ ಸುರೇಂದ್ರ ಸಹ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಓದಿ:ಉಭಯ ಸದನದಲ್ಲಿ ಕರ್ನಾಟಕ ಸ್ಟಾಂಪ್, ಕ್ರಿಮಿನಲ್ ಕಾನೂನು ತಿದ್ದುಪಡಿ ವಿಧೇಯಕಗಳ ಮಂಡನೆ