ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಇದ್ದಕ್ಕಿದ್ದಂತೆ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅನಾಹುತ ತಪ್ಪಿದೆ.
ನಗರದ ಹೃದಯ ಭಾಗದಲ್ಲಿರುವ ಹಳೇ ತಾಲೂಕು ಕಚೇರಿ ಮುಂಭಾಗದಲ್ಲಿ ವಿದ್ಯುತ್ ಕಂಬದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕಂಡ ನಗರ ಠಾಣೆಯ ಪೊಲೀಸರು, ಕೂಡಲೇ ಅಗ್ನಿಶಾಮಕ ದಳದವರನ್ನು ಕರೆಸಿ ವಿದ್ಯುತ್ ಕಡಿತಗೊಳಿಸಿ ನಂತರ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಂದಿನಂತೆ ಪ್ರತಿನಿತ್ಯ ನಗರ ನಿವಾಸಿಗಳು, ಗ್ರಾಹಕರು ಓಡಾಟ ನಡೆಸುತ್ತಿದ್ದು, ಭಯಭೀತರಾಗಿ ನಡು ರಸ್ತೆಗೆ ಇಳಿದು ದಿಕ್ಕು ತೋಚದಂತಾಗಿದ್ದಾರೆ. ಹೊತ್ತಿ ಉರಿದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.