ಕರ್ನಾಟಕ

karnataka

ETV Bharat / state

ಕಾಂಗ್ರೆಸ್‌ ಹಿರಿಯ ಮುಖಂಡ ಪ್ರಭಾಕರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ - Prime Minister Narendra Modi administration

ಪ್ರಧಾನಿ ನರೇಂದ್ರ ಮೋದಿ ಆಡಳಿತ ಹಾಗೂ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಪ್ರಭಾಕರ್ ರೆಡ್ಡಿ ಮತ್ತವರ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Prabhakar Reddy and supporters join the BJP
ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಪ್ರಭಾಕರ್ ರೆಡ್ಡಿ ಮತ್ತು ಬೆಂಬಲಿಗರು ಬಿಜೆಪಿಗೆ ಸೇರ್ಪಡೆ

By

Published : Sep 12, 2020, 7:58 PM IST

ಬಾಗೇಪಲ್ಲಿ:ತಾಲ್ಲೂಕಿನ ಕಸಬಾ ಹೋಬಳಿ ದೇವರ ಗುಡಿಪಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಸ್ಯಗಾರಿಪಲ್ಲಿ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೋಚಿಮುಲ್ ನಿರ್ದೇಶಕರಾದ ಪ್ರಭಾಕರ ರೆಡ್ಡಿ ಹಾಗೂ ತಮ್ಮ ಅಪಾರ ಬೆಂಬಲಿಗರೊಂದಿಗೆ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾದ್ಯಕ್ಷ ರಾಮಲಿಂಗಪ್ಪ ರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ತದನಂತರ ಪ್ರಭಾಕರ್ ರೆಡ್ಡಿ ಮಾತನಾಡಿ, ಈಗಿರುವ ಬಹುತೇಕ ಪಕ್ಷಗಳು ಕುಟುಂಬಗಳಿಗೆ ಸೀಮಿತವಾಗಿವೆ. ಹೀಗಾಗಿ, ಜನರ ಹಿತ ಬಯಸುವ ಬಿಜೆಪಿ ಪಕ್ಷ ಸೇರಿದ್ದೇನೆ. ಮೋದಿಯವರ ಕಾರ್ಯವೈಖರಿ ನನಗೆ ಇಷ್ಟ ಎಂದು ತಿಳಿಸಿದರು.

ಬಿಜೆಪಿಯ ರಾಷ್ಟ್ರವಾದ ಹಾಗೂ ಅಭಿವೃದ್ಧಿ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದಾಗಿ ಸ್ಷಷ್ಟಪಡಿಸಿದ ಅವರು, ಪ್ರಧಾನಿ ಮೋದಿ ಅವರ ಅಭಿವೃದ್ಧಿ ಪರ ರಾಜಕಾರಣ ಹಾಗೂ ದೇಶವನ್ನು ಅವರು ಮುನ್ನಡೆಸುತ್ತಿರುವ ರೀತಿ ನಿಜಕ್ಕೂ ಅನನ್ಯ , ಮೋದಿ ನೇತೃತ್ವದಲ್ಲಿ ದೇಶ 21ನೇ ಶತಮಾನದ ಪ್ರಶ್ನಾತೀತ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.

ABOUT THE AUTHOR

...view details