ಚಿಕ್ಕಬಳ್ಳಾಪುರ :ಗೌರಿಬಿದನೂರು ಕ್ಷೇತ್ರದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ಹಿನ್ನೆಲೆ ಕ್ಷೇತ್ರದ ಸ್ಥಳೀಯ ಪ್ರಭಾವಿ ರಾಜಕಾರಣಿ ಪುಟ್ಟಸ್ವಾಮಿಗೌಡರವರು ಪ್ರಚಾರ ಕೈಗೊಂಡಿದ್ದು, ಗ್ರಾಮದ ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ.
ಗೌರಿಬಿದನೂರಿನಲ್ಲಿ ಭರ್ಜರಿ ಪ್ರಚಾರ ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ಮುಗಿದಿದೆ. ಇದೀಗ ಎರಡನೇ ಹಂತದ ಚುನಾವಣೆ ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆಯಲ್ಲಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ.
ಗೌರಿಬಿದನೂರು ಕ್ಷೇತ್ರದ ಶಾಸಕ ಶಿವಶಂಕರ್‌ರೆಡ್ಡಿಗೆ ಕಡಿವಾಣ ಹಾಕಲು ಪುಟ್ಟಸ್ವಾಮಿಗೌಡರವರು ತಂತ್ರಗಳನ್ನು ಹೆಣೆದಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಈಗಾಗಲೇ ಅಬ್ಬರದ ಪ್ರಚಾರಗಳು ತಾಲೂಕಿನ ಎಲ್ಲಾ ಗ್ರಾಮಗಳಲ್ಲೂ ಜೋರಾಗಿದೆ.
ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ಇಂದು ಹುದುಗೂರು ಗ್ರಾಮದಲ್ಲಿ ಪುಟ್ಟಸ್ವಾಮಿ ಗೌಡರು ಪ್ರಚಾರ ಕೈಗೊಂಡಿದ್ದು, ನೂರಾರು ಕಾರ್ಯಕರ್ತರು ಗೌಡರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.