ಚಿಕ್ಕಬಳ್ಳಾಪುರ (ಚಿಂತಾಮಣಿ): ಲಾಕ್ಡೌನ್ನಿಂದಾಗಿ ಸಾರಿಗೆ ಇಲಾಖೆಯ ಬಹಳಷ್ಟು ಮಂದಿ ನೌಕರರು ಕೆಲಸವಿಲ್ಲದೇ ಪರದಾಡುತ್ತಿದ್ದರೆ, ಖಾಸಗಿ ವ್ಯಕ್ತಿಯೊಬ್ಬ ಸರ್ಕಾರಿ ಕೆಲಸವನ್ನು ನಿರ್ವಹಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿ ದರ್ಬಾರ್
ಚಿಂತಾಮಣಿ ನಗರದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಿಗೆ ವ್ಯಕ್ತಿಯೊಬ್ಬರು ಕಾರ್ಯ ನಿರ್ವಹಿಸುತ್ತಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಸಾರಿಗೆ ಇಲಾಖೆಯಲ್ಲಿ ಸಾಕಷ್ಟು ಮಂದಿ ನೌಕರರು ಕೆಲಸವಿಲ್ಲದೇ ಪರದಾಡುತ್ತಿದ್ದಾರೆ. ಆದರೆ, ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಕಾರ್ಯನಿರ್ವಹಿಸುತ್ತಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಚಿಂತಾಮಣಿ ನಗರದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಿಗೆ ವ್ಯಕ್ತಿಯೊಬ್ಬರು ಕಾರ್ಯನಿರ್ವಹಿಸುತ್ತಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಸಾರಿಗೆ ಇಲಾಖೆಯಲ್ಲಿ ಸಾಕಷ್ಟು ಮಂದಿ ನೌಕರರು ಕೆಲಸವಿಲ್ಲದೇ ಪರದಾಡುತ್ತಿದ್ದಾರೆ. ಆದರೆ, ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ವ್ಯಕ್ತಿ ಕಾರ್ಯನಿರ್ವಹಿಸುತ್ತಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಡಿಪೋ ಮ್ಯಾನೇಜರ್ ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಖಾಸಗಿಯವರನ್ನು ನೇಮಿಸಿದ್ದು, ಬಿಡುವಿನ ಸಮಯದಲ್ಲಿ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಆದರೆ, ಸರ್ಕಾರದಿಂದ ಯಾವುದೇ ಹಣವನ್ನು ನೀಡುತ್ತಿಲ್ಲ ಎಂದು ಈಟಿವಿ ಭಾರತ್ಗೆ ಸ್ಪಷ್ಟಪಡಿಸಿದ್ದಾರೆ.