ಚಿಕ್ಕಬಳ್ಳಾಪುರ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಉಪನ್ಯಾಸಕನ ಶವ ಪತ್ತೆಯಾಗಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಖಾಸಗಿ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ - hanging tree in private school teacher
ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಆತ್ಮಹತ್ಯೆ
ಗ್ರಾಮದ ನಿವಾಸಿ ಮುರುಳಿ (30) ಮೃತ ವ್ಯಕ್ತಿ. ಇವರು ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ತಡರಾತ್ರಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದಿಬ್ಬೂರಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.