ಚಿಕ್ಕಬಳ್ಳಾಪುರ (ಚಿಂತಾಮಣಿ): ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ದೃಶ್ಯ ಮಾಧ್ಯಮದ ವರದಿಗಾರರು ಮತ್ತು ಕ್ಯಾಮರಾಮೆನ್‍ಗಳ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪುಟ್ಟಣ್ಣಯ್ಯ ಬಣ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗಲಭೆ, ಗಲಾಟೆಗಳ ಸಂದರ್ಭದಲ್ಲಿ ಮಾಧ್ಯಮದವರಿಗೆ ರಕ್ಷಣೆ ಇಲ್ಲವಾಗಿದೆ. ಪತ್ರಕರ್ತರನ್ನು ಗುರಿಯಾಗಿಸಿಕೊಂಡು ವಿನಾಕಾರಣ ಹಲ್ಲೆ ನಡೆಸುವವರನ್ನು ಕೂಡಲೇ ಬಂಧಿಸಿ, ಕಾನೂನು ರೀತಿಯಲ್ಲಿ ಶಿಕ್ಷಿಸುವಂತೆ ರಾಜ್ಯದ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.