ಕರ್ನಾಟಕ

karnataka

By

Published : Oct 6, 2020, 10:04 AM IST

ETV Bharat / state

ಹಥ್ರಾಸ್​​ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ದಲಿತ ಸೇನೆ ಒತ್ತಾಯ

ಅತ್ಯಾಚಾರಕ್ಕೊಳಗಾದ ಯುವತಿಯ ಮೃತದೇಹವನ್ನು ಕುಟುಂಬ ವರ್ಗದವರಿಗೆ ನೀಡದೆ ಅಲ್ಲಿನ ಪೊಲೀಸರು ಅದನ್ನು ಸುಟ್ಟು ಹಾಕಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Protest in Chikkaballapur  ಹಥ್ರಾಸ್ ಅತ್ಯಾಚರ ಪ್ರಕರಣ
Protest in Chikkaballapur ಹಥ್ರಾಸ್ ಅತ್ಯಾಚರ ಪ್ರಕರಣ

ಚಿಂತಾಮಣಿ (ಚಿಕ್ಕಬಳ್ಳಾಪುರ) :ಉತ್ತರಪ್ರದೇಶದ ಹಥ್ರಾಸ್‌ನಲ್ಲಿ ಯುವತಿಯ ಮೇಲೆ ನಡೆದಿರುವ ಅತ್ಯಾಚಾರ ಖಂಡಿಸಿ ದಲಿತ ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ

ಕಳೆದ ಎರಡು ವಾರಗಳ ಹಿಂದೆ ಉತ್ತರಪ್ರದೇಶದ ಹಥ್ರಾಸ್‌ನಲ್ಲಿ ಯುವತಿಯ ಮೇಲೆ ನಾಲ್ವರು ಅತ್ಯಾಚಾರ ನಡೆಸಿ, ಕೊಲೆ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಅತ್ಯಾಚಾರಕ್ಕೊಳಗಾದ ಯುವತಿಯ ಮೃತದೇಹವನ್ನು ಕುಟುಂಬ ವರ್ಗದವರಿಗೆ ನೀಡದೆ ಅಲ್ಲಿನ ಪೊಲೀಸರು ಅದನ್ನು ಸುಟ್ಟು ಹಾಕಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಪ್ರತಿ ಹೆಣ್ಣು ಮಗಳ ರಕ್ಷಣೆ ಮತ್ತು ಶಿಕ್ಷಣ ಪಡೆಯುವಂತಾಗಬೇಕು ಎಂಬ ಇರಾದೆಯೊಂದಿಗೆ ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷಣೆ ನೀಡಿತ್ತು. ಆದರೆ ಅಧಿಕಾರ ಚುಕ್ಕಾಣಿ ಹಿಡಿದು 6 ವರ್ಷ ಕಳೆದಿದೆ. ಆದರೆ ಸರ್ಕಾರದ ಘೋಷಣೆ ಈಡೇರುವ ಬದಲಾಗಿ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸರ್ಕಾರ ಕೂಡಲೇ ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು. ನಂತರ ತಹಶೀಲ್ದಾರರಿಗೆ ಮನವಿ ಪತ್ರವನ್ನು ಸಲ್ಲಿಸಿ ಪ್ರತಿಭಟನೆ ಹಿಂಪಡೆದರು.

ABOUT THE AUTHOR

...view details