ಚಿಕ್ಕಬಳ್ಳಾಪುರ: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಗುಡಿಬಂಡೆ ಪಟ್ಟಣದ ಜಾಮಿಯಾ ಮಸೀದಿ ಆವರಣದಲ್ಲಿ ಜಾಮಿಯಾ ಉಲ್ ಮಾಯಿ ಹಿಂದ್ ಸಂಘಟನೆ ಸದಸ್ಯರು ಮತ್ತು ಮುಸ್ಲಿಂ ಸಮುದಾಯದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರ ಪ್ರತಿಭಟನೆ - chikkaballapura Protest against the Citizenship Amendment Act
ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಗುಡಿಬಂಡೆ ಪಟ್ಟಣದ ಜಾಮಿಯಾ ಮಸೀದಿ ಆವರಣದಲ್ಲಿ ಜಾಮಿಯಾ ಉಲ್ ಮಾಯಿ ಹಿಂದ್ ಸಂಘಟನೆ ಸದಸ್ಯರು ಮತ್ತು ಸಮುದಾಯದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಪೌರತ್ವ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ
ಫಯಾಜ್ ಅಹ್ಮದ್ ಖಾನ್ ಮಾತನಾಡಿ, ಧರ್ಮದ ಆಧಾರದಲ್ಲಿ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ವಿಚಾರ ಸಂವಿಧಾನದತ್ತ ಸಮಾನತೆ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗಿದೆ. ಈ ಕಾಯ್ದೆಗೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ತಿದ್ದುಪಡಿ ಮಾಡಲಾಗಿದೆ. ಸರ್ಕಾರ ಧರ್ಮಧರ್ಮಗಳ ಮಧ್ಯೆ ವೈರತ್ವದ ಬೀಜ ಬಿತ್ತುವಂತಹ ಕೆಲಸಕ್ಕೆ ಕೈ ಹಾಕಬಾರದು ಎಂದು ಟೀಕಿಸಿ, ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಸಿಗ್ಗಾಪತ್ ವುಲ್ಲಾ ಹಾಗೂ ಆರಕ್ಷಕ ವೃತ್ತ ನಿರೀಕ್ಷಕ ಸುನಿಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.