ಬಾಗೇಪಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ - ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ
ಬಾಗೇಪಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
Protest
ಸಿಐಟಿಯು ತಾಲೂಕು ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ ಮಾತನಾಡಿ, ಬಡ ಮಹಿಳೆಯರು ಬಿಸಿಯೂಟದ ಉದ್ಯೋಗವನ್ನೇ ನಂಬಿಕೊಂಡಿದ್ದು, ಕಳೆದ 4 ತಿಂಗಳಿಂದ ಆದಾಯವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಇವರಿಗೆ ಆರ್ಥಿಕ ಪ್ಯಾಕೇಜ್ ಸಹ ಸರ್ಕಾರ ಘೊಷಣೆ ಮಾಡಿಲ್ಲ. ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನಾ ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ಎನ್.ಮಂಜುನಾಥಸ್ವಾಮಿ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.