ಚಿಕ್ಕಬಳ್ಳಾಪುರ:ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ನೀಡುವಂತೆ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಚಿಂತಾಮಣಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.
ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ನೀಡದಿದ್ದರೆ ಹೋರಾಟ: ರೈತ ಸಂಘ ಎಚ್ಚರಿಕೆ - ಚಿಂತಾಮಣಿ ತಾಲೂಕು ಕಚೇರಿ
ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜಗಳನ್ನು ನೀಡದಿದ್ದರೆ ರೈತ ಸಂಘದಿಂದ ಉಗ್ರ ಹೋರಾಟ ನಡೆಸಲಾಗುವುದ ಎಂದು ರೈತ ಸಂಘ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಎಚ್ಚರಿಸಿದೆ.
![ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ನೀಡದಿದ್ದರೆ ಹೋರಾಟ: ರೈತ ಸಂಘ ಎಚ್ಚರಿಕೆ das](https://etvbharatimages.akamaized.net/etvbharat/prod-images/768-512-7389989-thumbnail-3x2-vi.jpg)
ರೈತ ಸಂಘ ಎಚ್ಚರಿಕೆ
ರೈತ ಸಂಘ ಎಚ್ಚರಿಕೆ
ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಜೆ.ವಿ.ರಘುನಾಥರೆಡ್ಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ನೆಲಗಡಲೆ, ರಾಗಿ, ತೊಗರಿ ಸೇರಿದಂತೆ ಅನೇಕ ಬಿತ್ತನೆ ಬೀಜಗಳು ಇದುವರೆಗೆ ರೈತರಿಗೆ ವಿತರಣೆ ಮಾಡಿಲ್ಲ. ಬರಪೀಡಿತ ಜಿಲ್ಲೆಗಳಲ್ಲಿ ಮಳೆ ಇಲ್ಲದೆ ಜನ ಸಂಕಷ್ಟದಲ್ಲಿದ್ದಾರೆ. ರೈತರಿಗೆ ಬಿತ್ತನೆ ಬೀಜ ನೀಡುವುದರಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಬಿತ್ತನೆ ಬೀಜಗಳನ್ನು ಸಕಾಲಕ್ಕೆ ನೀಡದಿದ್ದಲ್ಲಿ ರೈತ ಸಂಘದಿಂದ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.