ಚಿಕ್ಕಬಳ್ಳಾಪುರ: ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ದ್ವಂದ್ವ ಹೇಳಿಕೆಗಳನ್ನು ನೀಡುತ್ತಿರುವ ಸರ್ಕಾರದ ವಿರುದ್ಧ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಯಿತು. ನಗರ ಡಿಡಿಪಿಐ ಕಚೇರಿಯಿಂದ ನಗರದ ಶಿಡ್ಲಘಟ್ಟ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೆ ಜಿಲ್ಲಾಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿ ಬಂತು.
ಸರ್ಕಾರದ ದ್ವಂದ್ವ ನೀತಿಗೆ ಆಕ್ರೋಶ: ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರತಿಭಟನೆ - chikkaballapura
ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ದ್ವಂದ್ವ ಹೇಳಿಕೆಗಳನ್ನು ನೀಡುತ್ತಿರುವ ಸರ್ಕಾರದ ವಿರುದ್ಧ ಚಿಕ್ಕಬಳ್ಳಾಪುರದ ಡಿಡಿಪಿಐ ಕಚೇರಿಯಿಂದ ಬಿ.ಬಿ.ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ 234 ರ ಮೂಲಕ ಡಿಸಿ ಕಚೇರಿಯವರೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದವರು ಪ್ರತಿಭಟನೆ ನಡೆಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಸರ್ಕಾರದ ನೀತಿಯಿಂದ ಖಾಸಗಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯ ಬದುಕು ಸಂಬಳವಿಲ್ಲದೆ ಬೀದಿಗೆ ಬರುವಂತಾಗಿದೆ. ಕೂಡಲೇ ಸರ್ಕಾರ ದ್ವಂದ್ವ ನೀತಿಯನ್ನು ಹಿಂಪಡೆದು ನ್ಯಾಯ ಒದಗಿಸಬೇಕೆೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಹೆನ್ರಿ ಪ್ರಸನ್ನ ಕುಮಾರ್, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಮೋಹನ್, ಚಿಕ್ಕಬಳ್ಳಾಪುರ ಜಿಲ್ಲಾ ತಾಲೂಕು ಅಧ್ಯಕ್ಷರುಗಳಾದ ನಾಗರಾಜ್, ತಮೀಮ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ವರ್ಗ ಹಾಜರಿದ್ದರು.