ಕರ್ನಾಟಕ

karnataka

ETV Bharat / state

'ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಮಾಡುವವರೆಗೂ ನಮ್ಮ ಹೋರಾಟ'

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಮಾಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

protest-demanding-implementation-of-justice-sadashivas-report
ಪ್ರತಿಭಟನೆ

By

Published : Mar 11, 2020, 2:02 PM IST

ಚಿಕ್ಕಬಳ್ಳಾಪುರ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳ ಸಾವಿರಾರು ಸದಸ್ಯರು ಆಗಮಿಸುತ್ತಿದ್ದಾರೆ.

ಮಾದಿಗ ದಂಡೋರ ಜಿಲ್ಲಾ ಅಧ್ಯಕ್ಷ ಎಂ.ರಾಮಪ್ಪ ಮಾತನಾಡಿ, ವರದಿ ಜಾರಿ ಮಾಡಲು ಒತ್ತಾಯಿಸಿ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ನಿರ್ಲಕ್ಷ್ಯ ತೋರುತ್ತಿವೆ. ಕೇವಲ ಭರವಸೆಗಳನ್ನು ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ ಎಂದು ದೂರಿದರು.

ಪ್ರತಿಭಟನಾಕಾರರು

ಹಿಂದೆ ಬೆಂಗಳೂರು ಚಲೋ ನಡೆಸಲು ಮುಂದಾದಾಗ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಶೀಘ್ರ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಹಲವು ತಿಂಗಳು ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ. ಮುಖ್ಯಮಂತ್ರಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ ಎಂದು ಒತ್ತಾಯಿಸಿದರು. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಮಾಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಉಪಾಧ್ಯಕ್ಷ ಪಿ.ಎಂ.ನರಸಿಂಹಯ್ಯ, ಪಿ.ವಿ.ವೆಂಕಟರವಣಪ್ಪ, ಮುನಿರಾಜು, ಪ್ರಕಾಶ್ , ನಾರಾಯಣಸ್ವಾಮಿ, ಶ್ರೀನಿವಾಸ್, ವೆಂಕಟೇಶ್, ಮುನಿಯಪ್ಪ, ಕದಿರಪ್ಪ ಭಾಗವಹಿಸಿದ್ದರು.

ABOUT THE AUTHOR

...view details