ಬಾಗೇಪಲ್ಲಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರು ಬಾಗೇಪಲ್ಲಿ ತಾಲೂಕು ಸಿಐಟಿಯು ಘಟಕ ವತಿಯಿಂದ ಪ್ರತಿಭಟನೆ ನಡೆಸಿದರು.
ಬಾಗೇಪಲ್ಲಿ: ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - Protest in bagepalli
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರು, ಬಾಗೇಪಲ್ಲಿ ತಾಲೂಕು ಸಿಐಟಿಯು ಘಟಕ ವತಿಯಿಂದ ಪ್ರತಿಭಟನೆ ನಡೆಸಿದರು.
ಪಟ್ಟಣದ ಶಾದಿ ಮಹಲ್ ಮುಂಭಾಗದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಚೇರಿ ಬಳಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಧರಣಿ ನಡೆಯಿತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಖಾಯಂಗೊಳಿಬೇಕು. ಇದರ ಜೊತೆ ಕನಿಷ್ಠ 21 ಸಾವಿರ ವೇತನ ನೀಡಬೇಕು. ಮಾಸಿಕ ಪಿಂಚಣಿಯಾಗಿ 10 ಸಾವಿರ ಜೊತೆಗೆ ಇಎಸ್ ಐ, ಪಿಎಫ್ ನೀಡಬೇಕು. ಆರೋಗ್ಯದ ರಕ್ಷಣೆಗೋಸ್ಕರ ಶಾಸನವನ್ನು ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೋವಿಡ್ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರಿಗೂ ಸುರಕ್ಷಾ ಸಾಧನಗಳನ್ನು ನೀಡಬೇಕು. ಕೊರೊನಾ ಸೇವೆಯ ಸಂದರ್ಭದಲ್ಲಿ ಮೃತಪಟ್ಟವರಿಗೆ 50 ಲಕ್ಷ ರೂ. ವಿಮೆ ನೀಡಬೇಕೆಂದು ಆಗ್ರಹಿಸಿದರು. ಕಾರ್ಯಕರ್ತೆಯರ ಪ್ರತಿಭಟನೆಗೆ ಬಾಗೇಪಲ್ಲಿ ತಾಲೂಕು ಸಿಐಟಿಯು ಘಟಕ ಬೆಂಬಲ ನೀಡಿತು.