ಕರ್ನಾಟಕ

karnataka

ETV Bharat / state

ಬಾಗೇಪಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಜನಧ್ವನಿ ಪ್ರತಿಭಟನೆ - Bagepalli chickballapura latest news

ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಾಗೇಪಲ್ಲಿ ತಾಲೂಕು ಕಚೇರಿ ಮುಂದೆ ಜನಧ್ವನಿ ಪ್ರತಿಭಟನೆ ನಡೆಸಲಾಯಿತು. ಉತ್ತಮ ಆಡಳಿತ ನಡೆಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಈ ವೇಳೆ ಆಕ್ರೋಶ ವ್ಯಕ್ತವಾಯಿತು.

Protest in Bagepalli
Protest in Bagepalli

By

Published : Aug 20, 2020, 4:17 PM IST

ಬಾಗೇಪಲ್ಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಜನ್ಮ ದಿನದ ಪ್ರಯುಕ್ತ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಾಗೇಪಲ್ಲಿ ತಾಲೂಕು ಕಚೇರಿ ಮುಂದೆ ಜನಧ್ವನಿ ಪ್ರತಿಭಟನೆ ನಡೆಸಲಾಯಿತು.

ಜನಧ್ವನಿ ಪ್ರತಿಭಟನೆ

ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳಶಾಹಿಗಳ ಪರ ಇವೆ. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯರಾದ(ಗೂಳೂರು) ಲಕ್ಷ್ಮೀ ನರಸಿಂಹಪ್ಪ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದೆ. ಅಷ್ಟೇ ಅಲ್ಲದೆ, ಜಿಡಿಪಿ ಕುಸಿತ ಸೇರಿ ಹಲವು ವಲಯಗಳಲ್ಲಿ ಸರ್ಕಾರದ ಆಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details