ಚಿಕ್ಕಬಳ್ಳಾಪುರ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಗುಡಿಬಂಡೆ ತಹಶೀಲ್ದಾರ್ ಸಿಗ್ಬತ್ತುಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಥ್ರಾಸ್ ಅತ್ಯಾಚಾರ ಘಟನೆ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ - ಚಿಕ್ಕಬಳ್ಳಾಪುರ ಅಪ್ಡೇಟ್
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಹಥ್ರಾಸ್ನಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ ದುಷ್ಟರಿಗೆ ಕೂಡಲೇ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಹಥ್ರಾಸ್ ಅತ್ಯಾಚಾರ ಪ್ರಕರಣ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಹಥ್ರಾಸ್ನಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ ದುಷ್ಟರಿಗೆ ಕೂಡಲೇ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಈ ಕೃತ್ಯವನ್ನು ಮರೆಮಾಚಲು ಯತ್ನಿಸುತ್ತಿರುವ ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಇಡೀ ದೇಶವ್ಯಾಪಿ ವಾಲ್ಮೀಕಿ ಸಮುದಾಯದ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.