ಚಿಕ್ಕಬಳ್ಳಾಪುರ:ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಾಲ ವಿತರಣೆ ವಿಚಾರದಲ್ಲಿ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಹಾಲಿ, ಮಾಜಿ ಶಾಸಕರ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ.
ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವಿರುದ್ಧ ಮಾಜಿ ಶಾಸಕ ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ - Sudhakar against MLA JK Krishna Reddy
ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಕ್ಷೇತ್ರದಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಮಾಜಿ ಶಾಸಕ ಡಾ. ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಚಿಂತಾಮಣಿ ತಾಲೂಕು ಕಚೇರಿಯ ಮುಂದೆ ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ ಸುಧಾಕರ್ ಬೆಂಬಲಿಗರು ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
![ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವಿರುದ್ಧ ಮಾಜಿ ಶಾಸಕ ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-11035663-thumbnail-3x2-fhjh.jpg)
ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಕ್ಷೇತ್ರದಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಮಾಜಿ ಶಾಸಕ ಡಾ. ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಚಿಂತಾಮಣಿ ತಾಲೂಕು ಕಚೇರಿಯ ಮುಂದೆ ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ ಸುಧಾಕರ್ ಬೆಂಬಲಿಗರು, ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಡಿಸಿಸಿ ಬ್ಯಾಂಕ್ ಸ್ತ್ರೀಶಕ್ತಿ ಸಂಘಗಳಿಗೆ ನೀಡುವ ಸಾಲ ವಿತರಣೆ ಮಾಜಿ ಶಾಸಕ ಸುಧಾಕರ್ ಮನೆಯಲ್ಲಿ ನಡೆಯುತ್ತಿದೆ ಎಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ರು. ಇತ್ತ ಮಾಜಿ ಶಾಸಕ ಡಾ. ಎಂ.ಸಿ.ಸುಧಾಕರ್ ಹಾಗೂ ಬೆಂಬಲಿಗರು ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಶಾಸಕರ ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.