ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋಟ್ಯಾಂತರ ವಹಿವಾಟನ್ನು ತಂದು ಕೊಡುತ್ತಿರುವ ಚಿಂತಾಮಣಿ ನಗರದಲ್ಲಿ ಬೀದಿ ದೀಪಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿದೆ.ನಗರಸಭೆ ಈ ಸಮಸ್ಯೆಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅಲ್ಲದೇ, ಕೆಲವು ವಾರ್ಡುಗಳಿಗೆ ಕಳೆದ ನಾಲ್ಕು ತಿಂಗಳುಗಳಿಂದ ಹನಿ ನೀರನ್ನು ಬಿಟ್ಟಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ನಗರಸಭೆ ಮುಂದೆ ಪ್ರತಿಭಟನೆ ಮಾಡಿ ಕೂಡಲೇ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.