ಕರ್ನಾಟಕ

karnataka

ETV Bharat / state

ಯುಪಿ ಯುವತಿ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪಿಎಸ್​​ಎಸ್ ಒತ್ತಾಯ - PSS Protest in Bagepalli

ಯುಪಿಯ ಹಥ್ರಾಸ್‌ನಲ್ಲಿ ಯುವತಿಯ ಮೇಲೆ ನಡೆದಿರುವ ಅತ್ಯಾಚಾರ ಖಂಡಿಸಿ ಜಿಲ್ಲೆಯ ಪ್ರಜಾ ಸಂಘರ್ಷ ಸಮಿತಿ ಪಕ್ಷದ ಸಂಚಾಲಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

Protest
Protest

By

Published : Oct 3, 2020, 8:52 PM IST

ಬಾಗೇಪಲ್ಲಿ :ಉತ್ತರಪ್ರದೇಶದ ಹಥ್ರಾಸ್‌ನಲ್ಲಿ ಯುವತಿಯ ಮೇಲೆ ನಡೆದಿರುವ ಅತ್ಯಾಚಾರ ಖಂಡಿಸಿ ಜಿಲ್ಲೆಯ ಪ್ರಜಾ ಸಂಘರ್ಷ ಸಮಿತಿ ಪಕ್ಷದ ಸಂಚಾಲಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕಳೆದ ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ಯುವತಿಯ ಮೇಲೆ ಮೇಲ್ಜಾತಿಗೆ ಸೇರಿದ ನಾಲ್ವರು ಅತ್ಯಾಚಾರ ನಡೆಸಿ, ಕೊಲೆ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಅತ್ಯಾಚಾರಕ್ಕೊಳಗಾದ ಯುವತಿಯ ಮೃತ ದೇಹವನ್ನು ಕುಟುಂಬವರ್ಗದವರಿಗೆ ನೀಡದೇ ಅಲ್ಲಿನ ಪೊಲೀಸರು ಅದನ್ನು ಸುಟ್ಟುಹಾಕಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಪ್ರತಿ ಹೆಣ್ಣು ಮಗಳ ರಕ್ಷಣೆ ಮತ್ತು ಶಿಕ್ಷಣ ಪಡೆಯುವಂತಾಗಬೇಕು ಎಂಬ ಇರಾದೆಯೊಂದಿಗೆ ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷಣೆ ನೀಡಿತ್ತು. ಆದರೆ, ಅಧಿಕಾರ ಚುಕ್ಕಾಣಿ ಹಿಡಿದು 6 ವರ್ಷ ಕಳೆದಿದೆ. ಅದರೆ ಸರ್ಕಾರದ ಘೋಷಣೆ ಈಡೇರುವ ಬದಲಾಗಿ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸರ್ಕಾರ ಕೂಡಲೇ ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ABOUT THE AUTHOR

...view details