ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಘಟನೆ ಕೊಲೆಯಲ್ಲಿ ಅಂತ್ಯವಾಗಿದೆ. ಚಿಂತಾಮಣಿ ನಗರದ ಟಿಪ್ಪು ನಗರದ ಮುಸ್ತಾಕ್ (35) ಎಂಬಾತನನ್ನು ಹತ್ಯೆ ಮಾಡಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ - ಚಿಂತಾಮಣಿ ನಗರದ ಮುಸ್ತಾಕ್ ಹತ್ಯೆ
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.
ಮುಸ್ತಾಕ್
ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್, ಆರೋಪಿ ಬಗ್ಗೆ ಈಗಾಗಲೇ ಮಾಹಿತಿ ಲಭ್ಯವಾಗಿದೆ. ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪೊಲೀಸ್ ಕಾನ್ಸ್ಟೇಬಲ್ನಿಂದ ನಿರಂತರ ಅತ್ಯಾಚಾರ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ