ಚಿಕ್ಕಬಳ್ಳಾಪುರ:ಯಡಿಯೂರಪ್ಪ ಮುಖ್ಯಮಂತ್ರಿ ಆದಮೇಲೆ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ ಎಂದು ಅಬಕಾರಿ ಸಚಿವ ಹೆಚ್ ನಾಗೇಶ್ ಹೇಳಿಕೆ ನೀಡಿದ್ದಾರೆ.
ಬಿಎಸ್ವೈ ಸಿಎಂ ಆದ್ಮೇಲೆ ರಾಜ್ಯದಲ್ಲಿ ಮಳೆ ಬೆಳೆ ಬಂಪರ್: ಸಚಿವ ನಾಗೇಶ್ ಗುಣಗಾನ - ಚಿಕ್ಕಬಳ್ಳಾಪುರದಲ್ಲಿ ಐಟಿಐ ಕಾಲೇಜು ಕಟ್ಟಡ ಉದ್ಘಾಟಿಸಿದ ಅಬಕಾರಿ ಸಚಿವ ಹೆಚ್ ನಾಗೇಶ್
ಸಿಎಂ ಯಡಿಯೂರಪ್ಪ ಒಂದು ರೀತಿ ಒಂಟಿ ಸಲಗದ ರೀತಿಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅವರು ಮುಖ್ಯಮಂತ್ರಿ ಆದಮೇಲೆ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ ಎಂದು ಅಬಕಾರಿ ಸಚಿವ ಹೆಚ್ ನಾಗೇಶ್ ಹೇಳಿದರು.
ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಐಟಿಐ ಕಾಲೇಜು ಕಟ್ಟಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತ್ಯಂತ ಶ್ರದ್ದಾ ಭಕ್ತಿಯಿಂದ ಕೆಲಸ ಮಾಡುತ್ತಿದೆ. ಎಲ್ಲವನ್ನು ಸಮರ್ಪಕವಾಗಿ ಮಾಡುತ್ತಿದೆ. ಸಿಎಂ ಯಡಿಯೂರಪ್ಪ ಒಂದು ರೀತಿ ಒಂಟಿ ಸಲಗದ ರೀತಿಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅವರು ಸಿಎಂ ಆದಮೇಲೆ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ ಎಂದರು.
ಪ್ರತಿ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಏನಾದರೂ ಒಂದು ಹೇಳಿಕೆ ನೀಡುತ್ತಲೇ ಇರುತ್ತವೆ. ಪ್ರತಿಪಕ್ಷಗಳ ಕೆಲಸವೇ ವಿರೋಧ ಮಾಡುವುದಲ್ಲವೇ ಎಂದು ಸಚಿವ ನಾಗೇಶ್ ಹೇಳಿದರು.