ಕರ್ನಾಟಕ

karnataka

ETV Bharat / state

ರೈಲ್ವೆ ಅಂಡರ್ ಪಾಸ್​ಗಳ ದುರಸ್ತಿ: ಸಂಸದರು ಅಧಿಕಾರಿಗಳಿಗೆ ತರಾಟೆ - ಚಿಕ್ಕಬಳ್ಳಾಪುರ ರೈಲ್ವೆ ಅಂಡರ್ ಪಾಸ್ ದುರಸ್ಥಿಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ರೈಲ್ವೆ ನಿಲ್ದಾಣಗಳ ಪರಿಶೀಲನೆ ನಡೆಸುವ ವೇಳೆ ರೈಲ್ವೆ ಅಂಡರ್ ಪಾಸ್ ದುರಸ್ಥಿ ಸಂಬಂಧಿಸಿದಂತೆ ಸಂಸದರಿಗೆ ಹಾಗೂ ರೈಲ್ವೆ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತಗೆದುಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಅಂಡರ್ ಪಾಸ್ ದುರಸ್ತಿಗೆ ಒತ್ತಾಯ

By

Published : Oct 17, 2019, 3:23 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ರೈಲ್ವೆ ನಿಲ್ದಾಣಗಳ ಪರಿಶೀಲನೆ ನಡೆಸುವ ವೇಳೆ ರೈಲ್ವೆ ಅಂಡರ್ ಪಾಸ್ ದುರಸ್ಥಿ ಸಂಭಂದಿಸಿದಂತೆ ಸಂಸದರಿಗೆ ಹಾಗೂ ರೈಲ್ವೆ ಅಧಿಕಾರಿಗಳಿಗೆ ಸಾರ್ವಜನಿಕರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ಸಂಸದರು ಕರೆದಿದ್ದ ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿದ್ದ ನೂರಾರು ಪ್ರಯಾಣಿಕರು ಸಾರ್ವಜನಿಕರು ನಿಲ್ದಾಣದಲ್ಲಿ ಕುಡಿಯಲು ಶುದ್ಧ ನೀರಿಲ್ಲ, ಸ್ವಚ್ಚವಾದ ಶೌಚಾಲಯಗಳಿಲ್ಲದೇ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದರಿಂದ ಶೀಘ್ರದಲ್ಲಿ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಿ ಎಂದು ಮನವಿ ಮಾಡಿದರು.

ಅಂಡರ್ ಪಾಸ್ ದುರಸ್ತಿಗೆ ಒತ್ತಾಯ

ಅಂಡರ್ ಪಾಸ್ ದುರಸ್ತಿಗೆ ಒತ್ತಾಯ:
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಹುತೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್​ಗಳು ಸಂಪೂರ್ಣ ಹದಗೆಟ್ಟಿದ್ದು, ಅಧಿಕಾರಿಗಳು ಹಾಗೂ ಸಂಸದರನ್ನು ಸಾರ್ವಜನಿಕರು ತರಾಟೆಗೆ ತಗೆದುಕೊಂಡರು.

ಇನ್ನು ಲೋಕಸಭೆ ಚುನಾವಣೆಗೂ ಮೊದಲು ಸಂಚರಿಸಿದ ನಿಜಾಮುದ್ದೀನ್ ಎಕ್ಸ್​ಪ್ರೆಸ್​ ರೈಲಿನ ಸಂಚಾರ ಕಳೆದ ಮೂರು ನಾಲ್ಕು ತಿಂಗಳುಗಳಿಂದ ಸ್ಥಗಿತಗೊಂಡಿದೆ. ಇದರಿಂದ ತಿರುಪತಿ, ದೆಹಲಿಗೆ ತೆರಳಲು ಸಮಸ್ಯೆಯಾಗಿದೆ. ಆದ್ದರಿಂದನಿಜಾಮುದ್ದೀನ್ರೈಲು ಸಂಚಾರವನ್ನು ಮತ್ತೆ ಪ್ರಾರಂಭಿಸಬೇಕೆಂದು ಹಾಗೂ ಸರಕು ಸಾಗಾಣಿಕೆ ಮಾಡಲು ಗೂಡ್ಸ್ ರೈಲು ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಸ್ವೀಕರಿಸಿದ ಸಂಸದ ಎಸ್ ಮುನಿಸ್ವಾಮಿ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

For All Latest Updates

ABOUT THE AUTHOR

...view details