ಚಿಕ್ಕಬಳ್ಳಾಪುರ: ನಗರದ ರೋಗಿ ಸಂಖ್ಯೆ 488 ರ ಸಂಪರ್ಕದಲ್ಲಿದ್ದ ಪೊಲೀಸ್ ಸಿಬ್ಬಂದಿ ಅಧಿಕಾರಿಗಳ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರೋಗಿ-488ರ ಸಂಪರ್ಕದಲ್ಲಿದ್ದ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳ ವರದಿ ನೆಗೆಟಿವ್
ಕಳೆದ ಮೂರು ದಿನಗಳ ಹಿಂದೆ ಚಿಕ್ಕಬಳ್ಳಾಪುರ ನಗರದಲ್ಲಿ ಪತ್ತೆಯಾಗಿದ್ದ ಕೊರೊನಾ ಪಾಸಿಟಿವ್ ಕೇಸ್-488 ರ ಸಂಪಕರ್ದಲ್ಲಿದ್ದ 10 ಜನ ಪೊಲೀಸರು ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳ ವರದಿ ನೆಗೆಟಿವ್ ಬಂದಿದೆ.
ಪೆ-488 ಸಂಪರ್ಕದಲ್ಲಿದ್ದ ಎಲ್ಲಾ ಅಧಿಕಾರಿಗಳ ವರದಿ ನೆಗೆಟಿವ್
ಕಳೆದ ಮೂರು ದಿನಗಳ ಹಿಂದೆ ನಗರದಲ್ಲಿ ಪತ್ತೆಯಾಗಿದ್ದ ಪಾಸಿಟಿವ್ ಕೇಸ್ ಸಂಪಕರ್ದಲ್ಲಿದ್ದ 10 ಜನ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳ ವರದಿ ನೆಗೆಟಿವ್ ಬಂದಿದೆ. ಸದ್ಯ ಎಲ್ಲರನ್ನೂ 12 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸದ್ಯ ಚಿಕ್ಕಬಳ್ಳಾಪುರ ನಗರವನ್ನು ಸೀಲ್ ಡೌನ್ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್, ಆರೋಗ್ಯ ಇಲಾಖೆ ಅಧಿಕಾರಿಗಳು ಹಗಲು ರಾತ್ರಿ ಎನ್ನದೇ ಕರ್ತವ್ಯದಲ್ಲಿ ತೊಡಗಿದ್ದಾರೆ.
Last Updated : Apr 27, 2020, 2:00 PM IST