ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇಂದು 32 ಜನರಲ್ಲಿ ಸೋಂಕು ದೃಢಪಟ್ಟಿದ್ದು, 68 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಚಿಕ್ಕಬಳ್ಳಾಪುರ 11, ಬಾಗೇಪಲ್ಲಿ ಚಿಂತಾಮಣಿ ತಲಾ 1, ಗೌರಿಬಿದನೂರು 11, ಗುಡಿಬಂಡೆ 3, ಶಿಡ್ಲಘಟ್ಟ 5 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,526ಕ್ಕೆ ಏರಿಕೆಯಾಗಿದೆ.
ಇನ್ನು ಚಿಕ್ಕಬಳ್ಳಾಪುರ 25, ಬಾಗೇಪಲ್ಲಿ 6, ಚಿಂತಾಮಣಿ 7, ಗೌರಿಬಿದನೂರು 21, ಶಿಡ್ಲಘಟ್ಟ 9 ಜನ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 11265 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 149 ಸೋಂಕಿತರು ಕೊವೀಡ್ ಕೇರ್ ಸೆಂಟರ್, ಕೊವೀಡ್ ಆಸ್ಪತ್ರೆ ಸೇರಿದಂತೆ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.