ಚಿಕ್ಕಬಳ್ಳಾಪುರ:ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಕೂಡಲೇ ಬಂಧಿಸುವಂತೆ ಆಶಾ ಸಂಘದ ಕಾರ್ಯಕರ್ತೆಯರು ಚಿಂತಾಮಣಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.
ಚಿಂತಾಮಣಿ: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಆಗ್ರಹ - Request from Asha activists in Chintamani
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಆಶಾಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಬಂಧಿಸುವಂತೆ ಆಶಾ ಸಂಘದ ಕಾರ್ಯಕರ್ತೆಯರು ಮನವಿ ಸಲ್ಲಿಸಿದ್ದಾರೆ.
ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಆಗ್ರಹ
ಮೇ 22ರಂದು ತಾಲೂಕಿನ ಮುರುಗಮಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ವೆಂಕಟಲಕ್ಷಮ್ಮ ಎಂಬುವರ ಮೇಲೆ ಐಮರಡ್ ಹಳ್ಳಿಯ ನಾಗರಾಜ್ ಎಂಬಾತ ಹಲ್ಲೆ ಮಾಡಿದ್ದ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದುವರೆಗೂ ಪೊಲೀಸರು ಕಾನೂನು ರೀತಿ ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಹಲ್ಲೆ ನಡೆಸಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕೆಂದು ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸಿದರು.