ಕರ್ನಾಟಕ

karnataka

ETV Bharat / state

ಹೊಸ ವರ್ಷಾಚರಣೆ: ನಂದಿಬೆಟ್ಟ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ - ETv Bharat kannada news

ಪ್ರವಾಸಿಗರು ಹೊಸ ವರ್ಷದಂದು ನಂದಿಬೆಟ್ಟದಲ್ಲಿ ಉಳಿದು ಸಂಭ್ರಮಾಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಕೆಲವು ನಿರ್ಬಂಧಗಳನ್ನು ಹಾಕಿದೆ.

Nandibetta
ನಂದಿಬೆಟ್ಟ

By

Published : Dec 30, 2022, 10:01 PM IST

ಚಿಕ್ಕಬಳ್ಳಾಪುರ : ನೀವೇನಾದ್ರುಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಪ್ಲಾನ್ ಮಾಡಿಕೊಂಡಿದ್ದರೆ ಜಿಲ್ಲಾಡಳಿತದ ನಿಯಮ ತಿಳಿದುಕೊಳ್ಳುವುದು ಒಳಿತು. ವಿಶ್ವವಿಖ್ಯಾತ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ‌.ನಾಗರಾಜ್ ತಿಳಿಸಿದ್ದಾರೆ. ಡಿಸೆಂಬರ್ 31 ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶ ಪ್ರತಿ

ಕೋವಿಡ್ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಈಗಾಗಲೇ ನಂದಿಬೆಟ್ಟದ ಬಳಿ ಡಿ.​ 31ರಂದು ರೂಮ್ ಬುಕಿಂಗ್ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಪೊಲೀಸ್ ಇಲಾಖೆ ಬಂದೋಬಸ್ತ್‌ ಮಾಡಿದ್ದು ರಾತ್ರಿ 11.30ರವೆರೆಗೆ ಮಾತ್ರವೇ ಪಾರ್ಟಿ, ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್.ನಾಗೇಶ್ ಹೇಳಿದ್ದಾರೆ.

ಇದನ್ನೂ ಓದಿ:ಡಿಸೆಂಬರ್ 31ರ ರಾತ್ರಿ 9 ಗಂಟೆಯ ನಂತರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ABOUT THE AUTHOR

...view details