ಕರ್ನಾಟಕ

karnataka

ETV Bharat / state

ಚುನಾವಣಾ ಫಲಿತಾಂಶ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಕೃಷಿ ಸಚಿವ - ಫಲಿತಾಂಶ

ಇತ್ತೀಚೆಗೆ ಹೊರಬಂದ ಚುನಾವಣಾ ಸಮೀಕ್ಷೆಗಳು ಸಂಪೂರ್ಣ ನಂಬಿಕೆಗೆ ಅರ್ಹವಲ್ಲ ಎಂಬುದು ಫಲಿತಾಂಶದ ನಂತರ ತಿಳಿಯಲಿದೆ. ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಗೆಲ್ಲುತ್ತಾರೆ ಎಂದು ಕೃಷಿ ಸಚಿವ ವಿಶ್ವಾಸ ವ್ಯಕ್ತಪಡಿಸಿದರು.

ಕೃಷಿ‌ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಶಂಕರ್ ರೆಡ್ಡಿ

By

Published : May 22, 2019, 12:50 AM IST

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದ ಶಾಸಕರಲ್ಲಿ ಭಿನ್ನಾಭಿಪ್ರಾಯ ಇರೋದು ನಿಜ. ಆದರೆ, ಲೋಕಸಭಾ ಚುನಾವಣೆ ಫಲಿತಾಂಶ ನಂತರ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೃಷಿ‌ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಶಂಕರ್ ರೆಡ್ಡಿ ಸ್ಪಷ್ಟಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ 5 ವರ್ಷ ಅವಧಿ ಪೂರೈಸುತ್ತದೆ ಹಾಗೂ ರಾಜ್ಯದಲ್ಲಿ ಮೈತ್ರಿ ಪಕ್ಷಗಳಿಂದ 15 ಎಂಪಿ ಸೀಟು ಗೆಲ್ಲುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತಿಚೇಗೆ ಹೊರಬಂದ ಚುನಾವಣಾ ಸಮೀಕ್ಷೆಗಳು ಸಂಪೂರ್ಣ ನಂಬಿಕೆಗೆ ಅರ್ಹವಲ್ಲ ಎಂಬುದು ಫಲಿತಾಂಶದ ನಂತರ ತಿಳಿಯಲಿದೆ. ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಗೆಲ್ಲುತ್ತಾರೆ ಎಂದು ತಿಳಿಸಿದರು.

ಕೃಷಿ‌ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಶಂಕರ್ ರೆಡ್ಡಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಒಕ್ಕಲಿಗರಾದ್ದರಿಂದ ಜಿಲ್ಲೆಯ ಬಹುತೇಕ ಮತಗಳು ಕಮಲದ ಪಾಲಾಗಲಿದೆ ಎನ್ನಲಾಗಿತ್ತು. ಅಷ್ಟೇ ಅಲ್ಲದೆ ಒಕ್ಕಲಿಗ ಸಮುದಾಯದವರು ಸಹ ಈ ಬಾರಿ ಕಾಂಗ್ರೆಸ್​ಗೆ ತಮ್ಮ ಬೆಂಬಲವಿಲ್ಲವೆಂದು ಸ್ಪಷ್ಟಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಒಕ್ಕಲಿಗ ಮತಗಳು ಬಿಜೆಪಿ ಅಭ್ಯರ್ಥಿ ಪಾಲಾಗಿದ್ರೂ ಇತರೆ ಸಮುದಾಯಗಳು ಮೈತ್ರಿ ಕೈ ಹಿಡಿದಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಮೋಡ ಬಿತ್ತನೆಗೆ ಸಕಲ ಸಿದ್ಧತೆ ಮಾಡಿದ್ದು, ಜೂನ್ 15 ರಂದು ಹುಬ್ಬಳ್ಳಿ ಹಾಗೂ ಬೆಂಗಳೂರು ಕೇಂದ್ರಗಳಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗುವುದು ಎಂದರು. ಅಲ್ಲದೇ ಚುನಾವಣಾ ನೀತಿ ಸಂಹಿತೆಯಿಂದ ಬರ ನಿರ್ವಹಣೆಗೆ ಯಾವುದೇ ಅಡಚಣೆ ಆಗಿಲ್ಲ ಎಂದು ತಿಳಿಸಿದರು.

ABOUT THE AUTHOR

...view details