ಚಿಕ್ಕಬಳ್ಳಾಪುರ :ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಗುಡ್ಡ ಕುಸಿತ ಉಂಡಾಗಿದೆ. ಗುಡ್ಡ ಕುಸಿದಿರುವ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಾಹನ ಸಂಚಾರ ಬಂದ್ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ರಾತ್ರಿ ನಂದಿ ಬೆಟ್ಟದ 10ನೇ ಕ್ರಾಸ್ ಬಳಿಯ ರಂಗಪ್ಪ ತಿರುವಿನಲ್ಲಿ ಗುಡ್ಡ ಕುಸಿದಿದೆ. ಈ ಹಿನ್ನೆಲೆ ನಂದಿ ಬೆಟ್ಟ ವೀಕ್ಷಣೆಗೆಂದು ಆಗಮಿಸಿದ ಪ್ರವಾಸಿಗರನ್ನು ಪೊಲೀಸರು ವಾಪಸು ಕಳುಹಿಸಯುವ ಕಾರ್ಯ ಮಾಡುತ್ತಿದ್ದಾರೆ.