ಚಿಕ್ಕಬಳ್ಳಾಪುರ : ಮದುವೆ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ದರೋಡೆಕೋರರು ಮನೆಗೆ ನುಗ್ಗಿ, ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆ ವಿವರ:ಚಿಂತಾಮಣಿ ತಾಲೂಕಿನ ಚಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ದಂಪತಿ ಊರಿನ ಹೊರಭಾಗದ ತೋಟದಲ್ಲಿ ಮನೆ ಕಟ್ಟಿಕೊಂಡು ಇಳಿ ವಯಸ್ಸಿನಲ್ಲಿ ಜೀವನ ಸಾಗಿಸುತ್ತಿದ್ದಾರೆ. ನಾರಾಯಣಸ್ವಾಮಿಯವರು ಕಂದಾಯ ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತರಾಗಿದ್ದಾರೆ. ಆದರೆ ಮೊನ್ನೆ ರಾತ್ರಿ 10 ಗಂಟೆ ಸುಮಾರಿಗೆ ಮದುವೆಯ ಆಮಂತ್ರಣ ಕೊಡುವ ನೆಪದಲ್ಲಿ ದರೋಡೆಕೋರರು ಮನೆಯ ಬಳಿ ಬಂದಿದ್ದಾರೆ.