ಚಿಕ್ಕಬಳ್ಳಾಪುರ: ರೌಡಿಶೀಟರ್ ಓರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಾದಲವೇಣಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಕಾದಲವೇಣಿ ಗ್ರಾಮದ ಮನೆಯೊಂದರಲ್ಲಿ ಕೊಲೆಯಾಗಿದ್ದ ವ್ಯಕ್ತಿಯನ್ನು ಹೊಸೂರು ಹೋಬಳಿಯ ಹಳೇ ಉಪ್ಪಾರಹಳ್ಳಿ ನಿವಾಸಿ ರಮೇಶ್ (34) ಎಂದು ಗುರುತಿಸಲಾಗಿದೆ.
ಈ ಹಿಂದೆ ಗೌರಿಬಿದನೂರು, ದೊಡ್ಡಬಳ್ಳಾಪುರ, ತುಮಕೂರು ವ್ಯಾಪ್ತಿಯಲ್ಲಿ ರೌಡಿಶೀಟರ್ ಪ್ರಕರಣದ ಹಿನ್ನೆಲೆ ಆರೋಪಿಯಾಗಿ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದು, ಇಂದು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್ಐಗಳಾದ ಅವಿನಾಶ್ ಮತ್ತು ಮೋಹನ್ ಧಾವಿಸಿ ಪರಿಶೀಲನೆ ನಡೆಸಿದ್ದು, ಯಾರೋ ಅಪರಿಚಿತರು ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರಬಹುದೆಂದು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.