ಕರ್ನಾಟಕ

karnataka

ETV Bharat / state

ಆರ್​ಆರ್​ಆರ್ ಪ್ರೀ - ರಿಲೀಸ್​ ಇವೆಂಟ್​ಗೆ ಕ್ಷಣಗಣನೆ: ಸಿಎಂ, ಶಿವಣ್ಣ ಸೇರಿದಂತೆ ಹಲವು ಗಣ್ಯರು ಭಾಗಿ - ಜೂ ಎನ್​ಟಿಆರ್ ಹಾಗೂ ರಾಮ್ ಚರಣ್ ಸಿನಿಮಾ

ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ಆರ್​ಆರ್​ಆರ್​’ ಚಿತ್ರದ ಪ್ರೀ-ರಿಲೀಸ್​ ಇವೆಂಟ್ ಇಂದು ಸಂಜೆ 6 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ​ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.

ಆರ್​ಆರ್​ಆರ್
ಆರ್​ಆರ್​ಆರ್

By

Published : Mar 19, 2022, 11:00 AM IST

Updated : Mar 19, 2022, 12:08 PM IST

ಚಿಕ್ಕಬಳ್ಳಾಪುರ: ಬಹು ನಿರೀಕ್ಷಿತ ಚಿತ್ರ 'ಆರ್​ಆರ್​ಆರ್' ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿದ್ದು, ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸುಮಾರು 100 ಎಕರೆ ಜಾಗದಲ್ಲಿ ಪ್ರೀ - ರಿಲೀಸ್ ಇವೆಂಟ್​ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಾಹುಬಲಿ ಚಿತ್ರದ ನಿರ್ದೇಶನದ ಬಳಿಕ ರಾಜಮೌಳಿ ಅವರ 'ಆರ್ ಆರ್ ಆರ್' ಚಿತ್ರದ ಮೇಲೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ಸಚಿವರು ಬರಲಿದ್ದಾರೆ. ಅಷ್ಟೇ ಅಲ್ಲದೇ, ಮೆಗಸ್ಟಾರ್ ಚಿರಂಜೀವಿ, ಬಾಲಕೃಷ್ಣ ಸೇರಿದಂತೆ ಹಲವಾರು ಗಣ್ಯ ನಾಯಕರು ಹಾಜರಾಗಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಸೂಪರ್ ಸ್ಟಾರ್‌ಗಳಾದ ಜೂ ಎನ್​ಟಿಆರ್ ಹಾಗೂ ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸದ್ಯಕ್ಕೆ ಕಾರ್ಯಕ್ರಮಕ್ಕೆ ಸುಮಾರು 4 ರಿಂದ 5 ಲಕ್ಷ ಅಭಿಮಾನಗಳು ಬರುವ ನಿರೀಕ್ಷೆ ಇರುವುದರಿಂದ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

'ಆರ್ ಆರ್ ಆರ್' ಪ್ಯಾನ್ ಇಂಡಿಯಾ ಚಿತ್ರವಾಗಿದ್ದರಿಂದ ಭಾರತದಲ್ಲಿಯೇ ಅತಿ ದೊಡ್ಡ ಪ್ರೀ - ರಿಲೀಸ್ ಈವೆಂಟ್ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವುದು ರಾಜ್ಯದ ಜನತೆಗೆ ಹಾಗೂ ಚಿಕ್ಕಬಳ್ಳಾಪುರ ಜನತೆಗೆ ಸಂತಸ ತಂದಿದೆ. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ಕರ್ನಾಟಕದಿಂದ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

'ಆರ್ ಆರ್ ಆರ್' ಪ್ರೀ ರಿಲೀಸ್ ಸೆಟ್‌ನಲ್ಲಿ 25 ಸಾವಿರ ಚದರ ಅಡಿಯ ಬೃಹತ್ ಎಸ್ಇಡಿ ಸ್ಕ್ರೀನ್ ಮತ್ತು 45 ಬೃಹತ್ ಲೇಸರ್ ಲೈಟ್‌ಗಳ ದೊಡ್ಡ ವೇದಿಕೆಯಲ್ಲಿ ದಿವಂಗತ ನಟ ಡಾ. ಪುನೀತ್ ರಾಜ್​ಕುಮಾರ್ ಅವರಿಗೆ ನಮನಗಳನ್ನು ಸಲ್ಲಿಸಲಾಗುತ್ತದೆ. ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ, ಅಕುಲ್ ಬಾಲಾಜಿ ತೆಲುಗಿನ ಖ್ಯಾತ ನಿರೂಪಕಿ ಸುಮಾ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಲೈವ್ ನೀಡುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ತಾರಕ್ಕೇರಿದೆ. ಕೆವಿಎನ್ ಸಂಸ್ಥೆ ವಿತರಣೆಯ ಜವಾಬ್ದಾರಿ ಪಡೆದುಕೊಂಡಿದ್ದು, ಅಭಿಮಾನಿಗಳಿಗೆ ಮುಕ್ತ ಅವಕಾಶ ಮಾಡಿಕೊಡಲಾಗಿದೆ. ಕೆವಿಎನ್ ಸಂಸ್ಥೆಯ www.kvproduction.co.in ವೆಬ್‌ನಲ್ಲಿ ಪಾಸ್‌ಗಳನ್ನು ಉಚಿತವಾಗಿ ಪಡೆದುಕೊಳ್ಳಲು ತಿಳಿಸಿದೆ.

ಇದನ್ನೂ ಓದಿ:ಹೋಳಿ ಸಂಭ್ರಮ ಹಾಳು ಮಾಡಿ ಬಿಟ್ಟರು - ತಮ್ಮ ಉಡುಪಿನಿಂದ ಮತ್ತೆ ಟ್ರೋಲ್​ಗೊಳಗಾದ ಉರ್ಫಿ ಜಾವೇದ್

Last Updated : Mar 19, 2022, 12:08 PM IST

ABOUT THE AUTHOR

...view details