ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ಶಬರಿಮಲೈ ಯಾತ್ರಿ ಸಾವು, ಇಬ್ಬರ ಸ್ಥಿತಿ ಗಂಭೀರ - chikkaballapura Sabarimala pilgrims car accident

ಆಂಧ್ರಪ್ರದೇಶದ ಗುಂತಕಲ್ ಮೂಲದ ಐವರು ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪಾಪಸ್ ಬರುವಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ಅವಘಡ ಸಂಭವಿಸಿದೆ.

Sabarimala pilgrim killed car accident near chikkaballapura
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ

By

Published : Jan 8, 2022, 8:12 AM IST

ಚಿಕ್ಕಬಳ್ಳಾಪುರ:ತಾಲೂಕಿನ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಆಂಧ್ರಪ್ರದೇಶದ ಗುಂತಕಲ್ ಮೂಲದ ಐವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪಾಪಸ್ ಬರುವಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಗ್ಗೆ 5 ಗಂಟೆ ಸಮಯದಲ್ಲಿ ಯಾತ್ರಿಗಳ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ಕಾರು ಪಂಚರ್ ಆಗಿದ್ದು, ಟೈರ್​​ ಬದಲಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಧರಾನೇಶ್ (22) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದಾರೆ. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಇತರ ಇಬ್ಬರು ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಫಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ABOUT THE AUTHOR

...view details