ಗೌರಿಬಿದನೂರು: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ನಗರದ ವರ್ತಕರು ಸ್ವಯಂ ಪ್ರೇರಿತ ಲಾಕ್ಡೌನ್ಗೆ ತೀರ್ಮಾನಿಸಿದ್ದಾರೆ.
ಗೌರಿಬಿದನೂರಿನಲ್ಲಿ ಸ್ವಯಂ ಪ್ರೇರಿತ ಲಾಕ್ಡೌನ್ಗೆ ಮುಂದಾದ ವರ್ತಕರು.. ಪ್ರತಿನಿತ್ಯ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೂ ಅಂಗಡಿಗಳನ್ನು ತೆಗೆಯುತ್ತೇವೆ ಹಾಗೂ ವಾರಾಂತ್ಯದಲ್ಲಿ ಶನಿವಾರ, ಭಾನುವಾರ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಸಂಪೂರ್ಣ ಬೆಂಬಲ ಕೊಡುತ್ತೇವೆ ಎಂದಿದ್ದಾರೆ.
ಈ ವೇಳೆ ಮಾತನಾಡಿದ ತಹಶೀಲ್ದಾರ್ ಶ್ರೀನಿವಾಸ್, ಕೊರೊನಾ ಎರಡನೇ ಅಲೆ ನಗರದಲ್ಲಿ ಹೆಚ್ಚಾಗುತ್ತಿವೆ. ಗ್ರಾಮೀಣ ಭಾಗದಲ್ಲೂ ಸೋಂಕು ಹೆಚ್ಚಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿರುವವರು ನಗರದಲ್ಲಿ ಹಿಡಿದು ತಿರುಗಾಡುತ್ತಿದ್ದಾರೆ ಎಂದು ಇತ್ತೀಚಿಗೆ ದೂರುಗಳು ಬಂದಿವೆ.
ತಾಲೂಕಿನ ಜನತೆ ಸಹಕಾರ ಕೊಟ್ಟು ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಸೋಂಕಿತರ ಸಂಪರ್ಕದಲ್ಲಿರುವವರು ಹೋಮ್ ಕ್ವಾರಂಟೈನ್ ಆಗಬೇಕು. 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.