ಚಿಕ್ಕಬಳ್ಳಾಪುರ: ನಾಡಬಂದೂಕು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಗಿರ್ಲಹಳ್ಳಿ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ: ನಾಡಬಂದೂಕು ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್ - ನಂದಿಗಿರಿಧಾಮ ಪೊಲೀಸರು
ಮನೆಯಲ್ಲೇ ನಾಡಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಮೂವರನ್ನು ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ
ತಾಲೂಕಿನ ಗುಂಗಿರ್ಲಹಳ್ಳಿ ಗ್ರಾಮದ ಮನೆಯಲ್ಲಿಯೇ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ರವಿಶಂಕರ್ ನೇತೃತ್ವದ ತಂಡ ದಾಳಿ ನಡೆಸಿ ಗಂಗಾಧರಪ್ಪ, ರಾಜಾ ಹನುಮಂತಪ್ಪ, ಅನಿಲ್ ಎಂಬುವರನ್ನು ಬಂಧಿಸಿದ್ದಾರೆ.
ಮನೆಯಲ್ಲಿ ದೊರೆತ ಬಂದೂಕುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.